ಧಾರವಾಡ, ಮಾ.13- ಹೆರಿಗೆಗೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆಯೊಬ್ಬರು ಆ್ಯಂಬುಲೆನ್ಸ್ಸ್ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ತಾಲ್ಲೂಕಿನ ಹಳ್ಳಿಗೇರಿ ಗ್ರಾಮದ ಬಳಿ ಸಕ್ಕೂಬಾಯಿ ತೆಗ್ಗಿನ್ ಎಂಬುವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸಕ್ಕೂಬಾಯಿಯನ್ನು ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪ್ರಸವ ವೇದನೆ ಪ್ರಾರಂಭವಾಗಿದ್ದರಿಂದ ಸಿಬ್ಬಂದಿ 108 ವಾಹನದಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ.