ಗೃಹ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ : ಮಲ್ಯ ಆಸ್ಪತ್ರೆಯಲ್ಲಿ ಲೋಕಾಯುಕ್ತರ ಆರೋಗ್ಯ ವಿಚಾರಿಸಿದ ದೇವೇಗೌಡರು

 

ಬೆಂಗಳೂರು: ರಾಜ್ಯದಲ್ಲಿ ಗೃಹ ಮಂತ್ರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ರಾಜ್ಯಸರ್ಕಾರಸಲ್ಲಿ ಕೋ ಆರ್ಡಿನೇಶನ್ ಸರಿಯಿಲ್ಲ ಮುಖ್ಯ ಮಂತ್ರಿಗಳು ಗೃಹಮಂತ್ರಿಗೆ  ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆರೋಪಿಸಿದ್ದಾರೆ.

ನಗರದಲ್ಲಿನ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ಲೋಕಾಯುಕ್ತರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿರುವ ಅವರು, ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರನ್ನು ಘಟನೆ ನಡೆದ ೧೦ ನಿಮಿಷದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಈ ಹಿನ್ನೆಲೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.

ಹಿರಿಯ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅಸಮಾಧಾನ ವ್ಯಕ್ತಪಡಿಸಿ ಮುಖ್ಯ ಮಂತ್ರಿಗೆ ಪತ್ರ ಬರೆದ ವಿಚಾರ ಬಗ್ಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಐ ಎ ಎಸ್ ಮತ್ತು ಐಪಿ ಎಸ್ ಅಧಿಕಾರಿಗಳು ಯಾರದ್ದೋ ಹಿಡಿತದಲ್ಲಿ ಇದ್ದಾರೆ. ಮುಖ್ಯಮಂತ್ರಿಯ ಹಿಡಿತದಲ್ಲಿಯೂ ಅಧಿಕಾರಿಗಳು ಇಲ್ಲ.  ಬೇರೆಯ ವ್ಯಕ್ತಿ ಹಿಡಿತದಲ್ಲಿ ಇದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ