ಬೆಂಗಳೂರು, ಮಾ.13- ಇನ್ವೆಸ್ಟ್‍ಮೆಂಟ್ ನೆಪದಲ್ಲಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಂ ಇನ್ವೆಸ್ಟ್‍ಮೆಂಟ್ ಕಂಪೆನಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಬಗ್ಗೆ ನಗರ ಪೆÇಲೀಸ್ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ದಿನ ಕಳೆದಂತೆ ಈ ಬಗ್ಗೆ ದೂರುಗಳು ಹೆಚ್ಚಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ವಹಿಸುವುದು ಸೂಕ್ತ ಎಂಬ ನಿರ್ಧಾರಕ್ಕೆ ನಗರ ಪೆÇಲೀಸರು ಬಂದಿದ್ದಾರೆ.