ಬೆಂಗಳೂರು,ಮಾ.13-ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಸಿಎಟಿ ತೀರ್ಪನ್ನು ಮಾ.21ಕ್ಕೆ ಕಾಯ್ದಿರಿಸಿದೆ.
ಸರ್ಕಾರದ ವರ್ಗಾವಣೆಯ ಆದೇಶ ಪ್ರಶ್ನಿಸಿ ಸಿಎಟಿಗೆ ಅರ್ಜಿ ಸಲ್ಲಿಸಿದ್ದ ರೋಹಿಣಿ ಸಿಂಧೂರಿ ಅವರ ಅರ್ಜಿ ವಿಚಾರಣೆ ನಡಸಿದ್ದ ಸಿಎಟಿ ಮಾ.21ರವರೆಗೆ ಯಥಾಸ್ಥಿತಿ ಮುಂದುವರೆಸುವಂತೆ ಸೂಚಿಸಿ 21ಕ್ಕೆ ತೀರ್ಪು ಕಾಯ್ದಿರಿಸಿದೆ.
ರೋಹಿಣಿ ಅವರ ಸ್ಥಾನಕ್ಕೆ ವರ್ಗಾವಣೆಯಾಗಿದ್ದ ಮೈಸೂರು ಜಿಲ್ಲಾಧಿಕಾರಿ ರಂದೀಪ್ ಅವರನ್ನು ಆ ಸ್ಥಾನದಲ್ಲಿ ಮುಂದುವರೆಯುವಂತೆ ಸೂಚಿಸಿದೆ.
ಬೆಂಗಳೂರು,ಮಾ.13-ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ವಿರಕ್ತ ಮಠಾಧೀಶರು ಎಚ್ಚರಿಸಿದ್ದಾರೆ.
ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಪ್ರತ್ಯೇಕ ಲಿಂಗಾಯಿತ ಧರ್ಮ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಬಿಡದಿದ್ದರೆ ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತಹೋರಾಟ ಮಾಡುತ್ತೇವೆ ಎಂದು ಇಂದು ಶಿವಯೋಗಿ ಮಂದಿರದಲ್ಲಿ ನಡೆದ ಮಠಾಧೀಶರ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.