ಬೆಂಗಳೂರು, ಮಾ.13- ಎಲ್ಐಸಿ ಕಚೇರಿಯೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ದಾಖಲೆಗಳು, ಕಂಪ್ಯೂಟರ್ಗಳು ಹಾನಿಗೀಡಾಗಿರುವ ಘಟನೆ ಕಬ್ಬನ್ಪಾರ್ಕ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎಂ.ಜಿ. ರಸ್ತೆಯ ಅನಿಲ್ಕುಂಬ್ಳೆ ವೃತ್ತದಲ್ಲಿರುವ ಎಲ್ಐಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 6.30ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದರಾದರೂ ಅಷ್ಟೊತ್ತಿಗಾಗಲೇ ಸಾವಿರಾರು ಕಡತಗಳು , ಕೆಲವು ಕಂಪ್ಯೂಟರ್ಗಳು ಹಾಗೂ ಫರ್ನಿಚರ್ಗಳು ಬೆಂಕಿಗೆ ಆಹುತಿಯಾಗಿದ್ದವು.
ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.