ಇಂಡಿಯಲ್ಲಿ ಮೂವರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ತಾಯಿ, ಮುಂದೇನಾಯ್ತು?

ವಿಜಯಪುರ: ತಾಯಿಯೊಬ್ಬಳು ತನ್ನ ಮೂರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಇಂಡಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಇಂಡಿ ತಾಲೂಕಿನ ಸಾತಪುರ ಗ್ರಾಮದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಅದೃಷ್ಟವಶಾತ್ ಒಂದು ಮಗು ಅಪಾಯದಿಂದ ಪಾರಾದರೆ, ಮಹಿಳೆ ಹಾಗೂ ಎರಡು ಮಕ್ಕಳು ಸಾವನ್ನಪ್ಪಿದ್ದಾರೆ.
ಲಕ್ಷ್ಮೀ ಪ್ರಕಾಶ ಬೂದಿಹಾಳ (35), ಮಗು ಬೀರಪ್ಪ(3), ಅಂಕುಶ(1) ಸಾವಿಗೀಡಾದ ತಾಯಿ-ಮಕ್ಕಳು. ಇನ್ನೋರ್ವ ಬಾಲಕಿ ದಾನಮ್ಮ (7)ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ