ಧಾರವಾಡ, ಮಾ.13- ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಕರಡಿ ಗುಡ್ಡದ ನಿವಾಸಿ ಲಲಿತಾ ಮಾಟರ (40) ಪತಿಯಿಂದಲೇ ಕೊಲೆಯಾದ ಪತ್ನಿ. ರಾತ್ರಿ ಕ್ಷುಲ್ಲಕ ವಿಚಾರವಾಗಿ ಪತಿ ಬಸವರಾಜ್ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಮೊದಲೇ ಮದ್ಯದ ಅಮಲಿನಲ್ಲಿದ್ದ ಬಸವರಾಜ್ ತಾಳ್ಮೆ ಕಳೆದುಕೊಂಡು ಕೂಗಾಟ, ಚೀರಾಟ ನಡೆಸಿ ಕೈಗೆ ಸಿಕ್ಕ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಲಲಿತಾ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಬಸವರಾಜನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.