ಹಾವೇರಿ, ಮಾ.13- ರಸ್ತೆ ಬದಿ ನಡೆದು ಹೋಗುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ
ಹಿರೇಕೆರೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಲೋಕನಗೌಡ ಪ್ಯಾಟಿ (60) ಮೃತಪಟ್ಟ ದುರ್ದೈವಿ. ಹಾವೇರಿ ಜಿಲ್ಲೆ ಹಿರೆಕೆರೂರುರ ಪಟ್ಟಣದ ಬಳಿ ನಡೆದು ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದು ಇವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಹಿರೇಕೆರೂರು ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.