ಬೆಂಗಳೂರು:ಮಾ-14: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರುವಾಗುತ್ತಿರುವ ಬೆನ್ನಲ್ಲೇ ಜೆಡಿಎಸ್ ವಿರುದ್ಧ ಬಂಡಾಯವೆದ್ದಿರುವ 7 ಮಂದಿ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಜೆಡಿಎಸ್ ನ 7 ಬಂಡಾಯ ಶಾಸಕರೂ ಮಾರ್ಚ್ 24 ರಂದು ಸ್ಪೀಕರ್ ಕೋಳಿವಾಡ ಅವರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್,ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ,ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ, ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಹಗರಿಬೊಮ್ಮನಹಳ್ಳಿ ಶಾಸಕ ಶಾಸಕ ಭೀಮಾ ನಾಯಕ್ ಅವರು ಬಂಡಾಯ ಶಾಸಕರಾಗಿದ್ದು, ಚುನಾವಣೆ ಘೋಷಣೆಗೂ ಮುನ್ನವೇ ರಾಜೀನಾಮೆಗೆ ನಿರ್ಧರಿಸಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಮಾರ್ಚ್ 25 ರಂದು ಮೈಸೂರಿನಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಏಳೂ ಶಾಸಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಏಳೂ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದೆ ಎನ್ನಲಾಗಿದೆ.
7-JDS Rebel MLAs,joining congress