ಮಳವಳ್ಳಿ,ಮಾ.14-ರಸ್ತೆ ದಾಟುತ್ತಿದ್ದ ಮಹಿಳೆಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಿರುಗಾವಲು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಎಚಲಗೆರೆ ಗ್ರಾಮದ ವನಜಾಕ್ಷಿ ಮೃತಪಟ್ಟ ದುರ್ದೈವಿ.
ಈಕೆ ತಮ್ಮ ಅಂಗಡಿಗೆ ಹೋಗಿ ಮನೆಗೆ ಹಿಂದಿರುಗಲು ಕಿರುಗಾವಲಿನ ಸಂತೆಮೈದಾನದ ಬಳಿ ರಸ್ತೆಬದಿ ನಿಂತಿದ್ದಳು. ಈ ವೇಳೆ ಮೈಸೂರಿನಿಂದ ಮಳವಳ್ಳಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವನಜಾಕ್ಷಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ವನಜಾಕ್ಷಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗುತ್ತಿದ್ದ. ಈ ವೇಳೆ ವಿಷಯ ತಿಳಿದು ಹೈವೇ ಪೆÇಲೀಸರು ಕಾರನ್ನು ಅಡ್ಡಗಟ್ಟಿ ಚಾಲಕನನ್ನು ವಶಕ್ಕೆ ಪಡೆದು ಕಿರುಗಾವಲು ಠಾಣೆಗೆ ಒಪ್ಪಿಸಿದ್ದಾರೆ.
ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಕಿರುಗಾವಲು ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.