ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಡಿಸ್ಚಾರ್ಜ್

ಬೆಂಗಳೂರು, ಮಾ.14-ಲೋಕಾಯುಕ್ತ ಕಚೇರಿಯಲ್ಲೇ ವ್ಯಕ್ತಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ ಎಂಟು ದಿನಗಳ ಹಿಂದೆ ಚಾಕು ಸಮೇತ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದ ರಾಜಸ್ಥಾನ ಮೂಲದ ಉದ್ಯಮಿ ತೇಜ್‍ರಾಜ್ ಶರ್ಮ ಎಂಬಾತ ವಿಶ್ವನಾಥ ಶೆಟ್ಟಿ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ.

ತೀವ್ರವಾಗಿ ಗಾಯಗೊಂಡಿದ್ದ ವಿಶ್ವನಾಥ ಶೆಟ್ಟಿ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಂಟು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು.

ಡಿಸ್ಚಾರ್ಜ್ ಆದರೂ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ವಿಶ್ವನಾಥ ಶೆಟ್ಟಿ ಅವರು ಇನ್ನೂ ಕೆಲ ದಿನಗಳ ಕಾಲ ಲೋಕಾಯುಕ್ತ ಕಚೇರಿಗೆ ಆಗಮಿಸುವ ಸಾಧ್ಯತೆ ಇಲ್ಲ.

ಅನೇಕ ಗಣ್ಯರ ಭೇಟಿ: ಚಾಕು ಇರಿತಕ್ಕೊಳಗಾಗಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಅನೇಕ ಗಣ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಆರೋಪಿ ತೇಜ್‍ರಾಜ್ ಶರ್ಮ ಚಾಕು ಇರಿದು ಪರಾರಿಯಾಗುತ್ತಿದ್ದ ವೇಳೆ ಲೋಕಾಯುಕ್ತ ಕಚೇರಿ ಸಿಬ್ಬಂದಿಯೇ ಆತನನ್ನು ಹಿಡಿದು ವಿಧಾನಸೌಧ ಪೆÇಲೀಸರಿಗೆ ಒಪ್ಪಿಸಿದ್ದರು.

ಆರೋಪಿ ಇದೀಗ ಸಿಸಿಬಿ ಪೆÇಲೀಸರ ವಶದಲ್ಲಿದ್ದಾನೆ. ನಾಳೆ ಈತನ ಪೆÇಲೀಸ್ ಕಸ್ಟಡಿ ಮುಗಿಯಲಿದ್ದು, ಸಿಸಿಬಿ ಪೆÇಲೀಸರು ನ್ಯಾಯಾಲಯದ ಮುಂದೆ ಆರೋಪಿ ಶರ್ಮನನ್ನು ಹಾಜರುಪಡಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ