ವೈದ್ಯಕೀಯ ಸೀಟುಗಳು ಹೊರ ರಾಜ್ಯದವರ ಪಾಲು: ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ

ಬೆಂಗಳೂರು,ಮಾ.14-ರಾಜ್ಯದಲ್ಲಿನ ವೈದ್ಯಕೀಯ ಸೀಟುಗಳನ್ನು ಹೊರರಾಜ್ಯದವರು ಪಡೆಯುತ್ತಿರುವುದರಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತಿದೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವ ವೈದ್ಯರ ಸಂಘ ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಡಾ.ಭರತ್ ಮಾತನಾಡಿ, ರಾಜ್ಯದಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಖಾಸಗಿ ವೈದ್ಯಕೀಯ ಕಾಲೇಜುಗಳಿದ್ದು , ಎಂಬಿಬಿಎಸ್ ಪೂರೈಸಿದ್ದ ಹೊರರಾಜ್ಯ ವಿದ್ಯಾರ್ಥಿಗಳು ನಮ್ಮ ರಾಜ್ಯದಲ್ಲಿ 600 ಎಂಡಿ, 300 ಎಂಎಸ್ ಸೀಟುಗಳನ್ನು ಪಡೆಯುತ್ತಿದ್ದಾರೆ.

ಇದರಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳು ಸೀಟುಗಳಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದಲ್ಲಿ 5 ವರ್ಷ ಎಂಬಿಬಿಎಸ್ ಪೂರೈಸಿದ ವಿದ್ಯಾರ್ಥಿಗಳಿಗೆ ಎಂಡಿ, ಎಂಎಸ್ ಸೀಟುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ ಎಂದರು.

ಸರ್ಕಾರಿ ವಲಯದಲ್ಲಿರುವ ಕಡಿಮೆ ವೆಚ್ಚದ ಸೀಟುಗಳನ್ನು ಹೊರರಾಜ್ಯದ ವಿದ್ಯಾರ್ಥಿಗಳು ಪಡೆಯುತ್ತಿರುವುದರಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಈ ಕುರಿತು ಹೊರರಾಜ್ಯದ ವಿದ್ಯಾರ್ಥಿಗಳು ಕೋರ್ಟ್‍ನ ಮೊರೆ ಹೋಗಿದ್ದು, ನಾಳೆ ನೀಡುವ ತೀರ್ಪಿನ ಆಧಾರದ ಮೇಲೆ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದಕ್ಕೆ ರಾಜ್ಯ ಸರ್ಕಾರದ ಬೆಂಬಲ ಬೇಕಾಗಿದ್ದು , ಸುಪ್ರೀಂಕೋಟ್ ್ ರಾಜ್ಯ ವಿದ್ಯಾರ್ಥಿಗಳ ಪರ ತೀರ್ಪು ನೀಡದೇ ಇದ್ದಲ್ಲಿ ಅಥವಾ ತೀರ್ಪಿನ ದಿನಾಂಕವನ್ನು ಮುಂದೂಡಿದರೆ ಬೃಹತ್ ಪ್ರತಿಭಟನೆ ಕೈಗೊಳ್ಳುವುದಾಗಿ ತಿಳಿಸಿದರು.

ಲಿಂಗಾಯತ/ವೀರಶೈವ ಪ್ರತ್ಯೇಕ ಧರ್ಮ ಪರಿಗಣನೆ ಕುರಿತು ನಡೆಯಬೇಕಿದ್ದ ಮಹತ್ವದ ಸಚಿವ ಸಂಪುಟ ಸಭೆ ಮುಂದೂದಿಕೆ
ಬೆಂಗಳೂರು,ಮಾ.14-ಲಿಂಗಾಯತ/ವೀರಶೈವ ಪ್ರತ್ಯೇಕ ಧರ್ಮವನ್ನಾಗಿ ಪರಿಗಣಿಸುವ ಕುರಿತು ಇಂದು ಸಂಜೆ ನಡೆಯಬೇಕಿದ್ದ ಮಹತ್ವದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜ್ವರದ ಹಿನ್ನೆಲೆಯಲ್ಲಿ ಸಭೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ನಿರಂತರವಾಗಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿಗಳಿಗೆ ಬಳಲಿಕೆಯಿಂದಾಗಿ ಜ್ವರ ಬಂದಿದ್ದು , ಕೊನೆ ಕ್ಷಣದಲ್ಲಿ ಇಂದು ಸಂಜೆ ನಡೆಯಬೇಕಿದ್ದ ಸಭೆಯನ್ನು ರದ್ದುಪಡಿಸಲಾಗಿದೆ.
ಸಭೆಯಲ್ಲಿ ಗಂಭೀರ ಹಾಗೂ ಮಹತ್ವದ ವಿಚಾರವಾದ ಲಿಂಗಾಯತ/ವೀರಶೈವ ಪ್ರತ್ಯೇಕ ಧರ್ಮದ ಕುರಿಂತೆ ಚರ್ಚೆ ನಡೆಯಬೇಕಿತ್ತು.
ಕೆಲವು ವೀರಶೈವ ಮಠಾಧೀಶರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಪ್ರತ್ಯೇಕ ಲಿಂಗಾಯಿತ ಧರ್ಮವನ್ನಾಗಿ ಪರಿಗಣಿಸಲು ಮುಂದಾಗಿದೆ. ರಾಜ್ಯ ಅಲ್ಪಸಂಖ್ಯಾತರ ಆಯೋಗ ಹಾಗೂ ಪ್ರತ್ಯೇಕ ಲಿಂಗಾಯಿತ ಧರ್ಮದ ಬಗ್ಗೆ ರಚಿಸಲಾಗಿದ್ದ ತಜ್ಞರ ಸಮಿತಿಯ ಶಿಫಾರಸ್ಸುಗಳ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ಬರಲಿತ್ತು.
ಪ್ರತ್ಯೇಕ ಧರ್ಮವನ್ನಾಗಿ ಪರಿಗಣಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಬಗ್ಗೆ ತೀರ್ಮಾನ ಮತ್ತು ಪ್ರತ್ಯೇಕ ಧರ್ಮದ ಜೊತೆಗೆ ಅಲ್ಪಸಂಖ್ಯಾತರ ಧರ್ಮದ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಬಗ್ಗೆಯೂ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿತ್ತು.

ಲಿಂಗಾಯಿತ ಧರ್ಮವನ್ನು ಪ್ರತ್ಯೇಕವಾಗಿ ಸ್ಥಾಪಿಸುವ ಮೂಲಕ ಧರ್ಮ ಒಡೆಯಲಾಗುತ್ತಿದೆ ಎಂದು ಕೆಲವು ವೀರಶೈವ ಮಠಾಧೀಶರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಇಂದು ನಡೆಯಲಿದ್ದ ಸಂಪುಟ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿರುವ ದೊಡ್ಡಬಿದರಕಲ್ಲಿನ ಘನತ್ಯಾಜ್ಯ ಸಂಸ್ಕರಣ ಘಟಕದ ಆವರಣದಲ್ಲಿ ಘನತ್ಯಾಜ್ಯ ಸಂಸ್ಕರಿಸಿ ವಿದ್ಯುತ್ ಘಟಕ ಸ್ಥಾಪಿಸಲು ಇಂಡಿಯನ್ ಪ್ರಾಜೆಕ್ಟ್ ಕಂಪನಿಗೆ 20 ವರ್ಷಗಳ ಅವಧಿಗೆ ನೀಡಲು ಅನುಮೋದನೆ, ಬಿಡದಿ ಪಟ್ಟಣದ ಒಳಚರಂಡಿ ಯೋಜನೆಯನ್ನು 98.20 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಆಡಳಿತಾತ್ಮಕ ಅನುಮೋದನೆ ಸೇರಿದಂತೆ ಇನ್ನಿತರ ಕೆಲವು ಮಹತ್ವದ ವಿಚಾರಗಳು ಸಭೆಯಲ್ಲಿ ಮಂಡನೆಯಾಗಿ ಅನುಮೋದನೆ ಪಡೆಯಬೇಕಿತ್ತು.

ಸಮಾನ ಕೆಲಸಕ್ಕೆ ಸಮಾನ ವೇತನ: ಸಿಐಟಿಯುನಿಂದ ನವ ಕರ್ನಾಟಕ ನಿರ್ಮಾಣಕ್ಕಾಗಿ ಕಾರ್ಮಿಕ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು,ಮಾ.14-ಸುಪ್ರೀಂಕೋರ್ಟ್‍ನ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಸಿಐಟಿಯು ಇಂದು ಪ್ರೆಸ್‍ಕ್ಲಬ್‍ನ ಆವರಣದಲ್ಲಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಕಾರ್ಮಿಕ ಪ್ರಣಾಳಿಕೆಯನ್ನು ಪಿಐಟಿಯು ಅಧ್ಯಕ್ಷೆ ವರಲಕ್ಷ್ಮಿ ಬಿಡುಗಡೆ ಮಾಡಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರು ಬಡ, ಮಧ್ಯಮ, ರೈತರು ಹಾಗೂ ಕೃಷಿ ಕೂಲಿಕಾರರ ಕುರಿತ ನೀತಿಗಳಲ್ಲಿ ಹಾಗೂ ತಿಳುವಳಿಕೆಗಳಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಯಾವುದೆ ಭಿನ್ನತೆ ಇಲ್ಲ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಗರ ಹಾಗು ಗ್ರಾಮಾಂತರ ಪ್ರದೇಶಗಳಲ್ಲಿನ ಸಮಜೀವಿಗಳ ಪ್ರಶ್ನೆಗಳ ಬಗ್ಗೆ ನಿರ್ಧಿಷ್ಟ ಧೋರಣೆಯನ್ನು ರೂಪಿಸುವ ಪ್ರಯತ್ನವಾಗಿ ಈ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಜನಪರ ಅಂಶಗಳನ್ನು ತಿರಸ್ಕರಿಸುತ್ತಿರುವ ರಾಜÀತೆ ತಿರಸ್ಕರಿಸಬೇಕೆಂದು ಸಿಐಟಿಯು ಕರೆ ನೀಡಿ ಕಾರ್ಮಿಕ ವರ್ಗದ ಪ್ರಣಾಳಿಕೆಯನ್ನು ಇಂದು ಬಿಡುಗೆಡ ಮಾಡಲಾಗಿದೆ ಎಂದರು.
ಪ್ರತಿ ರಾಜ್ಯದಲ್ಲೂ ಕೂಡ ಜನಪ್ರಿಗೊಳಿಸುವ ಹಲವು ಭಾಗ್ಯದ ಯೋಜನೆಗಳನ್ನು ರಾಜ್ಯ ರಾಜ್ಯ ಸರ್ಕಾರಗಳು ಜಾರಿ ಮಾಡತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರವು ಕೂಡ ಕೇಂದ್ರ ಸರ್ಕಾರ ರೀತಿ ಆರ್ಥಿಕ ನೀತಿಯನ್ನು ಅನುಸರಿಸುತ್ತಿದೆ.

ಅಸಂಘಟಿತ ಭವಿಷ್ಯ ನಿಧಿ ಶಾಸನ ಜಾರಿಗೊಳಿಸಬೇಕು ಮತ್ತು ಅವರಿಗೆ ಸಾಮಾಜಿಕ ಭದ್ರತೆ ನೀಡಬೇಕು ಎಲ್ಲ ಜಿಲ್ಲೆಗಳಲ್ಲೂ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಬೇಕು. ಕಾರ್ಮಿಕರಿಗೆ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡಬೇಕು. ಬೆಲೆ ಏರಿಕೆ ನಿಯಂತ್ರ ಮಾಡಬೇಕು. ಬೆಲೆ ಏರಿಕೆ ನಿಯಂತ್ರಣ ಮಾಡಬೇಕು ಸಾರ್ವತ್ರಿಕ ಪಡಿತರ ವ್ಯವಸ್ಥೆ ಮಾಡಬೇಕು ಮತ್ತು ಸಂಘಟಿತ ಮತ್ತು ಅಸಂಘಟಿತ ವಸತಿಹೀನ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಭಾರತೀಯ ಕಾರ್ಮಿಕ ಮಾದರಿಯಂತೆ ಕರ್ನಾಟಕ ಕಾರ್ಮಿಕ ಸಮ್ಮೇಳನ ಮಾಡಬೇಕು ಕೈಗಾರಿಕ ಕಾರ್ಮಿಕರ ನಿವೃತ್ತಿ ವಯಸ್ಸನ್ನು 60ಕ್ಕೆ ಹೆಚ್ಚು ಮಾಡಬೇಕು. ನೂತನ ಪಿಂಚಣಿ ಬದಲು ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

ದುಡಿಯುವ ಜನರಿಗೆ ಸಾಮಾಜಿಕ ಭದ್ರತೆ ಮುಂತಾದ ಪ್ರಗತಿಶೀಲ ಜನಪರ ಆರ್ಥಿಕ ಧೋರಣೆಗಳನ್ನು ದುಡಿಯುವ ಜನರೇ ಸರ್ಕಾರವನ್ನು ಒತ್ತಾಯಿಸಬೇಕೆಂದು ಪಿಐಟಿಯು ಒತ್ತಾಯಿಸಿತು.

ಕಾರ್ಮಿಕ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳೆಂದರೆ ಸಮಾನ ವೇತನವನ್ನು 18 ಸಾವಿರಕ್ಕೆ ನಿಗದಿಪಡಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ನಿಧಿ ಜಾರಿಗೊಳಿಸಬೇಕು. ಎಲ್ಲ ಜಿಲ್ಲೆಗಳಲ್ಲೂ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಬೇಕು. ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬೆಲೆ ನಿಯಂತ್ರಣ ಮಾಡಬೇಕು ಸೇರಿದಂತೆ ಇನ್ನು ಮುಂತಾದ ಅಂಶಗಳು ಪ್ರಣಾಳಿಕೆಯಲ್ಲಿ ಒಳಗೊಂಡಿವೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ