ಮಾಗಡಿ,ಮಾ14- ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧದ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದಾರೆ ಎಂದು ಆರೋಪಿಸಿ ಪೆÇಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಮೇಲೆ ಪೆÇಲೀಸರು ಲಾಠಿ ಪ್ರಹಾರ ನಡಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಏನಿದು ಹಿನ್ನೆಲೆ:
ಮೊನ್ನೆ ಫೇಸ್‍ಬುಕ್‍ನಲ್ಲಿ ಕಾಂಗ್ರೆಸ್ ಮುಖಂಡ ಆನಂದ್‍ಕುಮಾರ್ ಎಂಬುವರು ಜೆಡಿಎಸ್ ಅಭ್ಯರ್ಥಿ ಎ.ಮಂಜು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಪೆÇೀಸ್ಟ್ ಮಾಡಿರುವುದು ಜೆಡಿಎಸ್ ಕಾರ್ಯಕರ್ತರ ಕಣ್ಣು ಕೆಂಪಾಗಿಸಿದೆ. ತದನಂತರ ಆನಂದ್ ಕುಮಾರ್‍ನಿವಾಸಕ್ಕೆ ತೆರಳಿದ ಜೆಡಿಎಸ್ ಕಾರ್ಯಕರ್ತರು ಇನ್ನು ಮುಂದೆ ಇಂತಹ ಹೇಳಿಕೆಗಳನ್ನು ದಾಖಲಿಸಬಾರದು ಎಂದು ಎಚ್ಚರಿಸಿದಾಗ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು. ಪೆÇಲೀಸರು ಪ್ರಕರಣವನ್ನು ಇತ್ಯರ್ಥಪಡಿಸಿದ್ದರು.
ಆದರೆ ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲವರು ಜೆಡಿಎಸ್ ಕೌನ್ಸಿಲರ್ ಬಾಲರಘು ಎಂಬುವರ ಮನೆಗೆ ಏಕಾಏಕಿ ನುಗ್ಗಿ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಇಂದು ಬೆಳಗ್ಗೆ ಮಾಗಡಿ ಪೆÇಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪೆÇಲೀಸರು ಉದ್ರಿಕ್ತರ ಮೇಲೆ ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಕಾರ್ಯಕರ್ತರ ಕಣ್ಣು ಕೆಂಪಾಗಿಸಿದೆ. ತದನಂತರ ಆನಂದ್ ಕುಮಾರ್‍ನಿವಾಸಕ್ಕೆ ತೆರಳಿದ ಜೆಡಿಎಸ್ ಕಾರ್ಯಕರ್ತರು ಇನ್ನು ಮುಂದೆ ಇಂತಹ ಹೇಳಿಕೆಗಳನ್ನು ದಾಖಲಿಸಬಾರದು ಎಂದು ಎಚ್ಚರಿಸಿದಾಗ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು. ಪೆÇಲೀಸರು ಪ್ರಕರಣವನ್ನು ಇತ್ಯರ್ಥಪಡಿಸಿದ್ದರು.