ಲಖನೌ:ಮಾ-14: ಉತ್ತರಪ್ರದೇಶ ಹಾಗೂ ಬಿಹಾರದ ಲೋಕಸಭೆ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಭಾರೀ ಹಿನ್ನಡೆ ಅನುಭವಿಸುತ್ತಿದೆ. ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲೇ ಹಿನ್ನಡೆ ಅನುಭವಿಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಮುಖಭಂಗವಾಗುವ ಸಾಧ್ಯತೆಗಳಿವೆ.
ಉತ್ತರ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಾದ ಗೋರಖ್ಪುರ ಹಾಗೂ ಫುಲ್ಪುರ್ ಲೋಕಸಭೆ ಕ್ಷೇತ್ರಗಳಲ್ಲಿ ಎಸ್ಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಎಸ್ಪಿ ಬೆಂಬಲದೊಂದಿಗೆ ಚುನಾವಣೆ ಎದುರಿಸಿರುವ ಎಸ್ಪಿ ಮತ ಎಣಿಕೆಯಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಐದು ಬಾರಿ ಪ್ರತಿನಿಧಿಸಿದ್ದ ಗೋರಖ್ ಪುರದಲ್ಲಿ ಸಮಾಜವಾದಿ ಪಕ್ಷದ ಪ್ರವೀಣ್ ಕುಮಾರ್ ನಿಶಾದ್ ಅವರು 17ನೇ ಸುತ್ತಿನಲ್ಲೂ 26,960 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಉಪೇಂದ್ರ ದತ್ ಶುಕ್ಲಾ ಅವರು ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನು ಫಲ್ಪುರ್ ಲೋಕಸಭಾ ಕ್ಷೇತ್ರದಲ್ಲೂ ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಗೇಂದ್ರ ಪ್ರತಾಪ್ ಅವರು ಬಿಜೆಪಿ ಅಭ್ಯರ್ಥಿ ಕೌಶಲೇಂದ್ರ ಸಿಂಗ್ ಅವರ ವಿರುದ್ಧ 29 ಸಾವಿರ ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಬಿಹಾರದ ಅರಾರಿಯ ಲೋಕಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದು, ಆರ್ಜೆಡಿ ಮುನ್ನಡೆ ಕಾಯ್ದುಕೊಂಡಿದೆ. ಆರ್ಜೆಡಿ ಹಾಗೂ ಜೆಡಿಯು ಮಧ್ಯೆ ತೀವ್ರ ಪೈಪೋಟಿಯಿದ್ದು, ಬಿಜೆಪಿಗೆ ಗೆಲುವು ಮರೀಚಿಕೆಯಾಗಿದೆ.
UP By-Election,SP leading in Gorakhpur, Phulpur