ಬೆಂಗಳೂರು, ಮಾ.14- ವಿಕ್ರಮ್ ಇನ್ವೆಸ್ಟ್ಮೆಂಟ್ ಕಂಪೆನಿಯ ವಂಚನೆ ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಳಿಸಲು ಕನಿಷ್ಟ ಒಂದು ವಾರವಾದರೂ ಬೇಕಾಗುತ್ತದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಐದು ಮಂದಿ ಆರೋಪಿಗಳು ಬನಶಂಕರಿ ಪೆÇಲೀಸರ ವಶದಲ್ಲಿದ್ದಾರೆ. ಇವರನ್ನುತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಈ ಸಂಜೆಗೆ ತಿಳಿಸಿದರು.
ಆರೋಪಿಗಳು ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಮೂರು ತಂಡಗಳು ಈ ಕಂಪೆನಿಯಲ್ಲಿ ಯಾರ್ಯಾರು ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದಾರೆಂಬ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದರು.
ಆರೋಪಿಗಳು ಹೂಡಿಕೆ ಹಣವನ್ನು ಯಾವ ರೀತಿ ದುರುಪಯೋಗಪಡಿಸಿಕೊಂಡಿದ್ದಾರೆ, ಹೂಡಿಕೆ ಹಣದಲ್ಲಿ ಏನೇನು ಖರೀದಿಸಿದ್ದಾರೆ, ಎಲ್ಲಿ ದುರುಪಯೋಗವಾಗಿದೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪ್ರಾಥಮಿಕ ತನಿಖೆಯಿಂದ ಎಷ್ಟು ಹಣ ವಂಚನೆಯಾಗಿದೆ ಎಂಬುದು ಗೊತ್ತಾಗಲಿದೆ ಎಂದು ಶರಣಪ್ಪ ತಿಳಿಸಿದರು.
ವಿಕ್ರಮ್ ಇನ್ವೆಸ್ಟ್ಮೆಂಟ್ ಕಂಪೆನಿಯ ವಂಚನೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆ, ಬೇಡವೆ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ನಗರ ಪೆÇಲೀಸ್ ಆಯುಕ್ತ ಸುನಿಲ್ಕುಮಾರ್ ಅವರು ತಿಳಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಎರಡು-ಮೂರು ದಿನಗಳ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.