ಬೆಂಗಳೂರು, ಮಾ.15- ನಾನಾಗಲಿ ನನ್ನ ಮಗನಾಗಲಿ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಸಚಿವ ಎಂ.ಆರ್.ಸೀತಾರಾಮ್ ಸ್ಪಷ್ಟಪಡಿಸಿದರು.
ಮಲ್ಲೇಶ್ವರ ಕ್ಷೇತ್ರದಿಂದ ನನ್ನ ಪುತ್ರನಾಗಲಿ ನಾನಾಗಲಿ ಆಕಾಂಕ್ಷಿಗಳಲ್ಲ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬ್ಲಾಕ್ ಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಈ ಮಟ್ಟಕ್ಕೆ ಬಂದಿದ್ದೇನೆ. ನನ್ನ ಪುತ್ರನೂ ಕೂಡ ಪಕ್ಷದಲ್ಲಿ ತೊಡಗಿಸಿಕೊಳ್ಳಲಿ. ನಂತರ ಆಕಾಂಕ್ಷಿಯಾಗಲಿ ಎಂದು ಹೇಳಿದರು.
ನಮ್ಮ ಬಲಿಜ ಸಮುದಾಯ 38 ಕ್ಷೇತ್ರದಲ್ಲಿ ಪ್ರಬಲವಾಗಿದೆ. ಎಲ್ಲರೂ ಕಾಂಗ್ರೆಸನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಯೋಜನಾ ವರದಿ ಸಮೀಕ್ಷೆ ನಡೆಸಲಾಗಿದೆ. ಆರು ಸಂಚಾರಿ ತಾರಾಲಯಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. 10 ಕೋಟಿ ವೆಚ್ಚದಲ್ಲಿ ತಾರಾಲಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಹಲವೆಡೆ ಖಗೋಳ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಸೀತಾರಾಮ್ ತಿಳಿಸಿದರು.