ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ

ಚಿಕ್ಕಮಗಳೂರು, ಮಾ.15- ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಶರಥ(32) ಮೃತಪಟ್ಟ ದುರ್ದೈವಿ.
ಈತ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ವಾಹನ ಚಾಲಕನಾಗಿದ್ದು, ನಿನ್ನೆ ಸಂಜೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದಶರಥ ತಲೆಗೆ ತೀವ್ರ ಗಾಯಗೊಂಡು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ