ವಿಜಯಪುರ, ಮಾ.15- ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‍ಗೆ ಡಿಕ್ಕಿ ಹೊಡೆದರೂ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬಸವನಬಾಗೇವಾಡಿ ನಡೆದಿದೆ. ಪುಣೆ-ದೇವದುರ್ಗ ನಡುವೆ ಸಂಚರಿಸುವ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮುಂಜಾನೆ 4ಗಂಟೆಯಲ್ಲಿ ವಿಜಯಪುರದಿಂದ ಬಸವನಬಾಗೇವಾಡಿಗೆ ಬರುವಾಗ ಪಟ್ಟಣದ ಬಿಎಲ್‍ಡಿಇ ಕಾಲೇಜು ಎದುರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹೋಗಿದೆ. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಟ್ಟರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬಸವನಬಾಗೇವಾಡಿ ಪೆÇಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.