ಹಾಸನ, ಮಾ.15- ಛತ್ತೀಸ್‍ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಕಳೆದ 13ರಂದು ನಡೆದ ಮಾವೋವಾದಿಗಳ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದ ಸಿಆರ್‍ಪಿಎಫ್ ಯೋಧ ಚಂದ್ರ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸ್ವಗ್ರಾಮದಲ್ಲಿ ಸಾರ್ವಜನಿಕ ದರ್ಶನದ ನಂತರ ಇಂದು ಬೆಳಗ್ಗೆ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು, ಅಧಿಕಾರಿಗಳು ಹುತಾತ್ಮ ಯೋಧನಿಗೆ ಅಂತಿಮವಾಗಿ ನಮನ ಸಲ್ಲಿಸಿ ಬೀಳ್ಕೊಟ್ಟರು.