ಬೆಂಗಳೂರು, ಮಾ.15-ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿರುವುದನ್ನು ಸ್ವಾಗತಿಸಿರುವ ಆದೇಶವನ್ನು ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ ಸ್ವಾಗತಿಸಿದೆ.
2018-21ನೆ ಸಾಲಿನ ಅಧ್ಯಾಪಕರ ಸಂಘದ ತ್ರೈವಾರ್ಷಿಕ ಚುನಾವಣೆ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಸರ್ಕಾರದ ನಿಲುವಿಗೆ ಅಭಿನಂದನೆ ಸಲ್ಲಿಸಲಾಯಿತು.
ಅಧ್ಯಾಪಕರು ಎದುರಿಸುತ್ತಿರುವ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಚರ್ಚೆ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲು ನಿರ್ಧರಿಸಲಾಯಿತು.
2016ರ ಯುಜಿಸಿ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಕೂಡಲೇ ಅನುಷ್ಠಾನಗೊಳಿಸಬೇಕು. ಇಲಾಖೆ ಇತ್ತೀಚೆಗೆ ಹೊರಡಿಸಿದ ಅವೈಜ್ಞಾನಿಕ ಡಿಎ ವಸೂಲಾತಿ ಆದೇಶವನ್ನು ಹಿಂಪಡೆಯಬೇಕು, 2003ರಲ್ಲಿ ನೇಮಕಗೊಂಡ ಅರೆಕಾಲಿಕ ಉಪನ್ಯಾಸಕರಿಗೆ ಸ್ಥಾನೀಕರಣ ನೀಡಬೇಕು, ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಖಾಯಂ ಪ್ರಾಂಶುಪಾಲರನ್ನು ನೇಮಕ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘದ ಅಧ್ಯಕ್ಷ ಟಿ.ಎಂ.ಮಂಜುನಾಥ್ ಆಗ್ರಹಿಸಿದರು.