ಮೈಸೂರು,ಮಾ.16- ವಿಜಯಗನರದ ಎರಡನೇ ಹಂತದಲ್ಲಿ ಕಾರೊಂದು ಅಪಘಾತಕ್ಕೀಡಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಹಿಲ್ ಸೋಮಯ್ಯ(21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ತನ್ನ ಸ್ನೇಹಿತರಾದ ಗಗನ್, ರಿಜಿ, ಕೌಶಿಕ್ ಹಾಗೂ ಬೋಪಣ್ಣ ಅವರೊಂದಿಗೆ ಸಾಹಿಲ್ ಕಾರಿನಲ್ಲಿ ಹೋಗುತ್ತಿದ್ದರು. ಕಾರನ್ನು ಸಾಹಿಲ್ ಚಾಲನೆ ಮಾಡುತ್ತಿದ್ದನು.
ವಿಜಯನಗರ ವಾಟರ್ಟ್ಯಾಂಕ್ ಬಳಿ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಾರು ಅತಿವೇಗವಾಗಿ ಚಾಲನೆ ಮಾಡಿದಾಗ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ.
ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಗಾಯಗೊಂಡರು. ತಕ್ಷಣ ಎಲ್ಲರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಸಾಹಿಲ್ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ವಿವಿಪುರಂ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.