ಶಿವಮೊಗ್ಗ, ಮಾ.16- ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ಆಗುಂಬೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೆಂದಾಳಬೈಲು ಗ್ರಾಮದ ಬಳಿ ಇಂದು ಬೆಳಗ್ಗೆ ಶವ ಪತ್ತೆಯಾಗಿದೆ. ವಾಯುವಿಹಾರಕ್ಕೆ ತೆರಳುತ್ತಿದ್ದ ಸಾರ್ವಜನಿಕರು ಶವವನ್ನು ಕಂಡು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೊಲೆಯಾಗಿರುವ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪರಿಶೀಲಿಸಿ ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆಗುಂಬೆ ಪೆÇಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.