ತುಮಕೂರು, ಮಾ.16- ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಕೊರಟಗೆರೆ ತಾಲ್ಲೂಕಿನ ಹೊನ್ನಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳು ಬಿಸಿ ಊಟ ಸಿದ್ಧಪಡಿಸಲು ಹೊಸ ಸಿಲಿಂಡರ್ ಅಳವಡಿಸುತ್ತಿದ್ದಾಗ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡು ಆಹಾರ ಸಾಮಗ್ರಿಗಳು, ಅಡುಗೆ ಪರಿಕರಗಳು ಚೆಲ್ಲಾಪಿಲ್ಲಿಗೊಂಡಿವೆ.
ಸ್ಫೋಟಗೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓಡಿ ಬಂದು ಶಿಕ್ಷಕರುಗಳಿಗೆ ವಿಷಯ ತಿಳಿಸಿದ್ದು , ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಶಾಲೆಯಲ್ಲಿದ್ದ ಮಕ್ಕಳನ್ನು ಹೊರಗಡೆ ಕಳುಹಿಸಿದ್ದಾರೆ.
ಒಂದು ವೇಳೆ ಮಕ್ಕಳು ಶಾಲೆಯಲ್ಲಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದ್ದರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು. ಕೊರಟಗೆರೆ ಠಾಣೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.