ಗ್ರೇಟರ್ ನೋಯ್ಡಾ, ಮಾ.16-ನಿಂತಿದ್ದ ಟ್ರಕ್ಕೊಂದಕ್ಕೆ ಕಾರು ಅಪ್ಪಳಿಸಿ ಮೂವರು ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ದೆಹಲಿ ಸಮೀಪದ ಗ್ರೇಟರ್ ನೋಯ್ಡಾದ ಬದಲ್ಪುರ್ನ ಜಿ.ಟಿ ರಸ್ತೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಗೊಂಡ ಇತರ ಐವರಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದೆ. ಇಂದಿರಾಪುರಂನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ಬದ್ಪುರ್ ಗ್ರಾಮದ ತನ್ನ ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ 12.30ರ ನಸುಕಿನಲ್ಲಿ ಈ ದುರಂತ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಅವಿಭಕ್ತ ಕುಟುಂಬದ 10 ಮಂದಿ ಐದು ಜನರ ಸಾಮಥ್ರ್ಯವಿರುವ ವ್ಯಾಗನ್-ಆರ್ನಲ್ಲಿ ಕಿಕ್ಕಿರಿದು ತುಂಬಿದ್ದರು. ಧೂಮ್ ಮಾಣಿಕ್ಪುರ್ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಅಪ್ಪಳಿಸಿತು. ಈ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐವರು ಅಸುನೀಗಿದರು. ಗಾಯಗೊಂಡ ಐವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ನೋಯ್ಡಾದ ಪೆÇಲೀಸ್ ವರಿಷ್ಠಾಧಿಕಾರಿ (ಸಂಚಾರ) ಅನಿಲ್ ಕುಮಾರ್ ಝಾ ತಿಳಿಸಿದ್ದಾರೆ.