ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯದ ಸಂಸದರ ಸಭೆ

ಬೆಂಗಳೂರು, ಮಾ.16-ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಸಭೆಯನ್ನು ಮಾ.22ರಂದು ಕರೆಯಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸಂಸದರ ಸಭೆಯನ್ನು 22ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದು, ರಾಜ್ಯ ಮುಂದೆ ತೆಗೆದಿಕೊಳ್ಳಲಿರುವು ನಿಲುವಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.  ಅಂದಿನ ಸಭೆಯಲ್ಲಿ ರಾಜ್ಯ ಪ್ರತಿನಿಧಿಸುವ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ಕೇಂದ್ರ ಸಚಿವರು, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ರಾಜ್ಯದ ಪರ ವಾದ ಮಾಡುವ ವಕೀಲರ ತಂಡದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯಕ್ಕಾಗುವ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿ ಮುಂದೆ ಯಾವ ರೀತಿ ಕಾನೂನು ಹೋರಾಟ ಕೈಗೊಳ್ಳುವ ಸಂಬಂಧ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ