ಚಿಕ್ಕಮಗಳೂರು, ಮಾ.16- ಪರೀಕ್ಷೆ ಸರಿಯಾಗಿ ಬರೆದಿಲ್ಲ ಎಂದು ಮನನೊಂದ ಇಬ್ಬರು ವಿದ್ಯಾರ್ಥಿಗಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಳೆಹೊನ್ನೂರು ಪಟ್ಟಣದ ಖಾಸಗಿ ಪ್ರೌಢಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಯನ್ನು ಸರಿಯಾಗಿ ಮಾಡಿಲ್ಲ ಎಂದು ಮನನೊಂದು ನಿನ್ನೆ ಮಧ್ಯಾಹ್ನ ಇಬ್ಬರೂ ನಗರದ ಮೆಡಿಕಲ್ ಸ್ಟೋರ್ನಲ್ಲಿ ಇಲಿ ಪಾಷಾಣ ಖರೀದಿ ಮಾಡಿ ಹಾಸ್ಟೇಲ್ಗೆ ತಂದು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಈ ವೇಳೆ ಇಬ್ಬರು ಅಸ್ವಸ್ಥಗೊಂಡಿದ್ದು, ಹಾಸ್ಟೆಲ್ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಾಳೆಹೊನ್ನೂರು ಠಾಣೆ ಪಿಎಸ್ಐ ನವೀನ್ನಾಯ್ಕ್ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.