ಚೆನ್ನೈ :ಮಾ-17: ಭಾರತೀಯ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಮಹತ್ವ ಕೊಡಬೇಕು ಹಾಗೂ ಎಂಬಿಬಿಎಸ್ ನಂತಹ ವೃತ್ತಿಪರ ಪದವಿ ಶಿಕ್ಷಣವನ್ನು ಭಾರತೀಯ ಭಾಷೆಗಳಲ್ಲಿ ನೀಡಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಿಂದುಸ್ಥಾನ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಶನ್ ಇದರ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭಗದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಅವರ ಮಾತೃ ಭಾಷೆಯಲ್ಲೇ ಶಿಕ್ಷಣ ನೀಡಬೇಕೆಂದು ನಾನು ಯಾವತ್ತೂ ಹೇಳುತ್ತಾ ಬಂದಿದ್ದೇನೆ; ಅಂತೆಯೇ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡುವುದರ ಅಗತ್ಯವಿದೆ ಎಂದರು.
ನಮ್ಮ ಶೈಕ್ಷಣಿಕ ವ್ಯವಸ್ಥೆ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಒಳಗೊಳಿಸಬೇಕಾದ ಅಗತ್ಯವಿದೆ ಎಂದು ನಾಯ್ಡು ಹೇಳಿದರು.