ಬೆಂಗಳೂರು, ಮಾ.17-ಇದೇ ತಿಂಗಳ 23 ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಾ.23 ರಿಂದ ಏಪ್ರಿಲ್ 6 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮುಚ್ಚುವಂತೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.