ಮೈಸೂರು, ಮಾ.17-ನಗರದ ಕೆ.ಆರ್.ಠಾಣೆ ಪೆÇಲೀಸರು ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ.
ಶ್ರೀರಂಗಪಟ್ಟಣದ ವಾಸಿಗಳಾದ ಆಸಿಫ್(22), ಹರೀಶ್(21) ಹಾಗೂ ಪ್ರದೀಪ್ (21) ಬಂಧಿತ ಆರೋಪಿಗಳು. ಬಂಧಿತರಿಂದ 90 ಸಾವಿರ ರೂ. ಬೆಲೆಯ ಮೂರು ದ್ವಿಚಕ್ರ ವಾಹನಗಳನ್ನು ಪೆÇಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಕೆ.ಆರ್.ಪೆÇಲೀಸ್ ಠಾಣೆ ವ್ಯಾಪ್ತಿಯ ಅಗ್ರಹಾರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ದ್ವಿಚಕ್ರವಾಹನ ಕಳ್ಳತನ ಮಾಡಿರುವುದು ಗೊತ್ತಾಗಿದೆ.