ಬಾಗ್ದಾದ್/ವಾಷಿಂಗ್ಟನ್, ಮಾ.17-ಅಮೆರಿಕ ಸೇನಾ ಹೆಲಿಕಾಪ್ಟರ್ ಪಶ್ಚಿಮ ಇರಾಕ್ನಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಎಲ್ಲ ಏಳು ಯೋಧರು ಮೃತಪಟ್ಟಿದ್ದಾರೆ. ಅಮೆರಿಕ ರಕ್ಷಣಾ ಅಧಿಕಾರಿಯೊಬ್ಬರು ನಿನ್ನೆ ಈ ವಿಷಯ ಖಚಿತಪಡಿಸಿದ್ದಾರೆ.
ವೈರಿಗಳ ದಾಳಿಯಿಂದ ಹೆಲಿಕಾಪ್ಟರ್ ಪತನಗೊಂಡಿದೆ ಎಂಬುದನ್ನು ತಳ್ಳಿ ಹಾಕಿರುವ ಅವರು ಅಪಘಾತದ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ. ಅಮೆರಿಕದ ಸೇನಾ ನೆಲೆಯಾಗಿರುವ ಇರಾಕ್ ಕಾಯಿಮ್ ನಗರದ ಬಳಿ ಎಚ್ಎಚ್-60 ಪೇವ್ ಹಾಕ್ ಹೆಲಿಕಾಪ್ಟರ್ ಪತನಗೊಂಡಿದೆ. ಇದರಲ್ಲಿದ್ದ ಎಲ್ಲ ಏಳು ಯೋದರು ಮೃತಪಟ್ಟಿದ್ದಾರೆ ಎಂದು ಇರಾಕ್ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ವಿರುದ್ಧ ನಡೆಯುತ್ತಿರುವ ಅಮೆರಿಕ ನೇತೃತ್ವದ ಸೇನಾ ಕಾರ್ಯಾಚರಣೆಗಳ ನಿರ್ದೇಶಕ ಬ್ರಿಗೇಡಿಯರ್ ಜನರಲ್ ಜೋನಾಥನ್ ಪಿ ಬ್ರಾಗಾ ತಿಳಿಸಿದ್ದಾರೆ.