ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಬೇಕೆಂಬುದೇ ನಮ್ಮ ಮುಖ್ಯ ಉದ್ದೇಶ: ಪೆÇಲೀಸ್ ಆಯುಕ್ತರಾದ ಸುನಿಲ್‍ಕುಮಾರ್

ಬೆಂಗಳೂರು, ಮಾ.19- ಮುಂಬರುವ ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಬೇಕೆಂಬುದೇ ನಮ್ಮ ಮುಖ್ಯ ಉದ್ದೇಶ ಎಂದು ಪೆÇಲೀಸ್ ಆಯುಕ್ತರಾದ ಸುನಿಲ್‍ಕುಮಾರ್ ತಿಳಿಸಿದ್ದಾರೆ.

ಚುನಾವಣೆಗೆ ನಿಯುಕ್ತಿಗೊಂಡಿರುವ ಹಿರಿಯ ಪೆÇಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮತಗಟ್ಟೆಗಳಿರುವ ಕೆಲ ಸೂಕ್ಷ್ಮ ಕೇಂದ್ರಗಳನ್ನು ಗುರುತಿಸಲಾಗುವುದು. ನಗರದಲ್ಲಿ 8 ಸಾವಿರ ಮತಗಟ್ಟೆಗಳಿದ್ದು, ಸೂಕ್ತ ಪೆÇಲೀಸ್ ಭದ್ರತೆ ಒದಗಿಸಲಾಗುವುದು ಎಂದರು.

ಶಸ್ತ್ರಾಸ್ತ್ರಗಳನ್ನು ಹೊಂದಿರುವವರಿಂದ ಚುನಾವಣೆ ಮುಗಿಯುವವರೆಗೂ ಅವುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ನಂತರ ಹಿಂದಿರುಗಿಸುವಂತೆ ಪೆÇಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಪ್ರಕಾರ ಎಲ್ಲ ರೌಡಿ ಶೀಟರ್‍ಗಳ ಪಟ್ಟಿ ಮಾಡಿ ಅವರ ಮೇಲೆ ಕಣ್ಣಿಡಲಾಗಿದೆ. ಚುನಾವಣೆಯಲ್ಲಿ ಭಾಗಿಯಾಗುವ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಒಟ್ಟಿನಲ್ಲಿ ಈ ಬಾರಿ ಶಾಂತಿಯುತ ಚುನಾವಣೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ