ಗಂಗಾವತಿ, ಮಾ.19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಕಾರ್ಯಕರ್ತರ ಮನೆಗೆ ತೆರಳಿದ ಪೆÇಲೀಸರು ಮಾಜಿ ಶಾಸಕ ಪರಣ್ಣ ಮನುವಳ್ಳಿ, ಮಾಜಿ ಸಂಸದ ಶಿವರಾಮೇಗೌಡ, ರೈತ ಮುಖಂಡ ತಿಪ್ಪರುದ್ರೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಮುಖಂಡರಾದ ಎಚ್.ಗಿರಿಗೌಡ, ನಾರಾಯಣಪ್ಪ ಸೇರಿದಂತೆ 30 ಜನರನ್ನು ಬಂಧಿಸಲಾಗಿದೆ.
ಎಡದಂಡೆ ಕಾಲುವೆಗೆ ನೀರು ಬಿಡುವ ವಿಚಾರವಾಗಿ ಸಾವಿರಾರು ಕಾರ್ಯಕರ್ತರು ಕೊಪ್ಪಳ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದು, ಸಿಎಂ ನಗರಕ್ಕೆ ಆಗಮಿಸಿದ ವೇಳೆ ಯಾವುದೇ ಅನಾಹುತ ಸಂಭವಿಸಬಾರದೆಂಬ ಉದ್ದೇಶದಿಂದ ಪೆÇಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡ ತಿಪ್ಪೇರುದ್ರಸ್ವಾಮಿ ಮಾತನಾಡಿ, ಜಿಲ್ಲೆಯ ಜೀವನಾಡಿಯಾದ ತುಂಬಭದ್ರಾ ಜಲಾಶಯ ವಿಚಾರವಾಗಿ ಇಂದು ನಾವೆಲ್ಲ ಒಟ್ಟಾಗಿ ಪ್ರತಿಭಟನೆ ಮಾಡಬೇಕೆಂದು ನಿರ್ಧರಿಸಿದ್ದೆವು. ನಮ್ಮ ಹತ್ತಿಕ್ಕುವ ಸಲುವಾಗಿ ಬಂಧಿಸಲಾಗಿದೆ ಎಂದು ದೂರಿದರು.