ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗೀ ಅವರಿಗೆ ಗೌರವ ಡಾಕ್ಟರೇಟ್

ಬೆಂಗಳೂರು, ಮಾ.19-ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗೀ ಅವರಿಗೆ ಆರೋಗ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಎರಡು ದಶಕಗಳ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ಅನುಭವವಿರುವ ಶ್ರೀಕೃಷ್ಣ ಮಾಯ್ಲೆಂಗೀ ಅವರು ಕನ್ನಡದಲ್ಲಿ ವೈದ್ಯಲೋಕ ಹಾಗೂ ಇಂಗ್ಲೀಷ್‍ನಲ್ಲಿ ಹೆಲ್ತ್ ವಿಷನ್ ಎಂಬ ಆರೋಗ್ಯ ಮಾಸ ಪತ್ರಿಕೆಗಳನ್ನು ಪ್ರಕಟಿಸುತ್ತಿದ್ದಾರೆ.

ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಶಾಲಾ-ಕಾಲೇಜುಗಳಲ್ಲಿ ಆರೋಗ್ಯನಂದನ ಎಂಬ ಕಾರ್ಯಕ್ರಮಗಳನ್ನು ಆಯೋಜಿಸುವುದರೊಂದಿಗೆ ಇದೀಗ ಆರೋಗ್ಯ ಕ್ಷೇತ್ರದ ಬಗ್ಗೆ ಮಾಹಿತಿ ನೀಡುವ  ಎರಡು ವೆಬ್‍ಸೈಟ್‍ಗಳನ್ನು ಆರಂಭಿಸಿದ್ದಾರೆ.

ಮೂಲತಃ ಕೇರಳದ ಕಾಸರಗೋಡಿನ ಕಾಟುಕುಕ್ಕೆ ಗ್ರಾಮದವರಾದ ಶ್ರೀಕೃಷ್ಣ ಮಾಯ್ಲೆಂಗಿ ಉದಯ ಟಿವಿಯಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.
ರೋಟರಿ, ಕಾರ್ಯನಿರತ ಪತ್ರಕರ್ತರ ಸಂಘ, ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಸೇರಿದಂತೆ 20ಕ್ಕೂ ಅಧಿಕ ಸಂಘ ಸಂಸ್ಥೆಗಳು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿವೆ.

ಪುಣೆಯಲ್ಲಿ ನಡೆದ ಸಮಾರಂಭದಲ್ಲಿ ಶ್ರೀಕೃಷ್ಣ ಮಾಯ್ಲೆಂಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ