ಥಾಣೆ, ಮಾ.19- ಐದು ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರ ಗುಂಪೆÇಂದು ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರ ರಾಜ್ಯದ ಥಾಣೆಯಲ್ಲಿ ಭಾನುವಾರ ನಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ರಸ್ತೆಯಲ್ಲಿ ಅಳುತ್ತಾ ನಿಂತಿರುವುದನ್ನು ಕಂಡ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಬಾಲಕಿಯನ್ನು ಪೆÇಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ವಿಚಾರಣೆ ನಡೆಸಿದ ಪೆÇಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ತಿಳಿದಿದೆ.
ಪ್ರಕರಣ ಸಂಬಂಧಾ ಪೆÇಲೀಸರು ಇದೀಗ ಅನಾಮಿಕ ವ್ಯಕ್ತಿಗಳ ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಅಪರಾಧಗಳಿಂದಮಕ್ಕಳ ರಕ್ಷಣೆ (ಪೆÇೀಸ್ಕೋ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.