ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲು ದೋಷಿ; ಜಗನ್ನಾಥ್ ಮಿಶ್ರಾ ಖುಲಾಸೆ

ರಾಂಚಿ:ಮಾ-19: ಬಹುಕೋಟಿ ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಬಿಹಾರ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕನೇ ಕೇಸ್ ನಲ್ಲಿ ಕೂಡ ಲಾಲು ಪ್ರಸಾದ್ ಯಾದವ್ ತಪ್ಪಿತಸ್ಥರು ಎಂದು ಪ್ರಕಟಿಸಿರುವ ನ್ಯಾಯಾಲಯ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ನಿಕಟವರ್ತಿ ಜಗನ್ನಾಥ್ ಮಿಶ್ರಾ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ.

ದುಮ್ಕಾ ಖಜಾನೆಯಲ್ಲಿ 3.13 ಕೋಟಿ ಮೊತ್ತದ ನಿಧಿಯನ್ನು ಬಳಸಿಕೊಂಡು ಬಹುಕೋಟಿ ಮೇವು ಹಗರಣದಲ್ಲಿ ಸಿಲುಕಿಕೊಂಡಿದ್ದರು. 1990 ರಲ್ಲಿ ಲಾಲು ಪ್ರಸಾದ್ ಯಾದವ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿತ್ತು.

ಲಾಲೂ ಪ್ರಸಾದ್, ಜಗನ್ನಾಥ್ ಮಿಶ್ರಾ ಸೇರಿದಂತೆ 30 ಮಂದಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ, ಮೊದಲ ಕೇಸ್ ನಲ್ಲಿ ಅಂದರೇ 2013 ರಲ್ಲಿ ನೀಡಿದ ತೀರ್ಪಿನಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷ ಜೈಲು ಶಿಕ್ಷೆಯಾಗಿತ್ತು, ಮೂರನೇ ಪ್ರಕರಣ ಸಂಬಂಧ ಜನವರಿಯಲ್ಲಿ ಶಿಕ್ಷೆ ನೀಡಲಾಗಿತ್ತು. ಮೇವು ಹಗರಣವನ್ನು ಸಿಬಿಐ ನಿಂದ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿತ್ತು.

Fourth fodder scam case,Lalu Prasad, convicted

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ