ನವದೆಹಲಿ,ಮಾ.19- ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಈ ನಡುವೆ ಜಾಗತಿಕ ಮಟ್ಟದಲ್ಲಿ ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಬಂಗಾರದ ಬೆಲೆಯಲ್ಲಿ ಕುಸಿತ ಕಂಡಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ 10 ಗ್ರಾಂ ಚಿನ್ನದ ಬೆಲೆಯಲ್ಲಿ 50 ರು.ನಷ್ಟು ಇಳಿಕೆ ಕಂಡು ಬಂದಿತ್ತು. ಇದೀಗ ಮತ್ತೆ ಜಾಗತಿಕವಾಗಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಹಳದಿ ಲೋಹದ ಬೆಲೆಯಲ್ಲಿಯೂ ಕೂಡ ಇಳಿಕೆ ಕಂಡು ಬಂದಿದೆ.
10 ಗ್ರಾಂ ಬಂಗಾರದ ಬೆಲೆಯಲ್ಲಿ ಶೇ.0.16ರಷ್ಟು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಇದರಿಂದ 10 ಗ್ರಾಂ ಚಿನ್ನದ ಬೆಲೆಯು 30,109 ರು.ನಷ್ಟಾಗಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಕೂಡ ಸ್ವರ್ಣದ ಬೆಲೆಯಲ್ಲಿ ಇಳಿಕೆ ಕಂಡು ಬರಬಹುದು ಎನ್ನಲಾಗಿದೆ.