ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ: ಸಂಸತ್ ಕಲಾಪ ನಾಲೆಗೆ ಮುಂದೂಡಿಕೆ

ನವದೆಹಲಿ:ಮಾ-19: ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ ಉಂಟಾದ ಹಿನ್ನಲೆಯಲ್ಲಿ ಲೋಕಸಭೆ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂಡೂಡಲಾಗಿದೆ.

ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಮೋದಿ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕೆಂದು ಟಿಡಿಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ಪಟ್ಟು ಹಿಡಿದರಲ್ಲದೇ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದರು. ನಮಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ನಾಯಕರನ್ನು ಸಮಾಧಾನ ಪಡಿಸಿ ತಮ್ಮ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಮನವಿ ಮಾಡಿಕೊಂಡರು.

ಆದರೂ, ಸಮಾಧಾನಗೊಳ್ಳದ ಸಂಸದರು ಮತ್ತಷ್ಟು ಗದ್ದಲವನ್ನುಂಟು ಮಾಡಲು ಆರಂಭಿಸಿದ್ದರು. ಈ ಹಿನ್ನಲೆಯಲ್ಲಿ ಲೋಕಸಭೆಯನ್ನು ನಾಳೆಗೆ ಮುಂದೂಡಲಾಯಿತು.

ರಾಜ್ಯಸಭೆಯಲ್ಲೂ ಅವಿಶ್ವಾಸ ಮಂಡನೆ ಕುರಿತು ತೀವ್ರ ಗದ್ದಲವುಂಟಾಗಿತ್ತು. ಕಲಾಪದ ವೇಳೆ ಮಾತನಾಡಿದ ಚಂದ್ರಬಾಬು ನಾಯ್ಡು ಅವರು. ಇದು ದೇಶ ಮತ್ತು ಸಂಸತ್ತಿನ ಹಿತಾಸಕ್ತಿಯಲ್ಲ. ಅವಿಶ್ವಾಸ ನಿರ್ಣಯ ಮಂಡನೆ ಕುರಿತು ಚರ್ಚೆಗೆ ನಾನು ಕಾದು ಕುಳಿತಿದ್ದೇನೆ. ಇದೇ ರೀತಿ ಇನ್ನೆಷ್ಟು ಸಮಯ ಮುಂದುವರೆಯಬೇಕು? ಎಂದು ಪ್ರಶ್ನಿಸಿದರು.

ಒಂದೆಡೆ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕೆಂದು ಟಿಡಿಪಿ ನಾಯಕರು ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಕಾವೇರಿ ನದಿ ನೀರು ವಿವಾದ ಕುರಿತಂತೆ ಚರ್ಚೆಗೆ ಅನುಮತಿ ನೀಡಬೇಕೆಂದು ಎಐಎಡಿಎಂಕೆ ಪಕ್ಷದ ನಾಯಕರು ಸದನದ ಬಾವಿಗಿಳಿದು ಪ್ರತಿಭಟಿಸಲು ಆರಂಭಿಸಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
Parliament,both Houses, adjourn

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ