ಕರಾವಳಿಯಲ್ಲಿ ರಾಹುಲ್ ಗಾಂಧಿ ಜನಾಶಿರ್ವಾದ ಯಾತ್ರೆ: ಮೀನುಗಾರರ ಅಹವಾಲು ಸ್ವೀಕಾರ

ಮಂಗಳೂರು:ಮಾ-20: ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ‌ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಎಐಸಿಸಿ ಅಧ್ಯಕ್ಷರನ್ನು ಸ್ವಾಗತಿಸಿದರು.

ಇದೇ ವೇಳೆ ತೆಂಕ ಎರ್ಮಾಲ್ ನಲ್ಲಿ ಕಡಲ ಕಿನಾರೆಯ ಮೀನುಗಾರ ಜೊತೆ ರಾಹುಲ್ ಮಾತುಕತೆ ನಡೆಸಿದರು. ಸ್ಥಳೀಯ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಕಿಶೋರ್ ಸುವರ್ಣ ಅವರ ಮನೆಯ ಜಗಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಕುಳಿತ ರಾಹುಲ್, ಸ್ಥಳೀಯರ ಸಮಸ್ಯೆ ಆಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.

ಇದೇ ವೇಳೆ ಉಡುಪಿಯ ತೆಂಕ ಎರ್ಮಾಳು ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿದ ರಾಹುಲ್, ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಉದ್ಘಾಟನೆ ಮಾಡಿದರು. ಬಳಿಕ ಸೇವಾದಳ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

Rahul Gandhi,Janashirvada Yatre,udupi,mangalore

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ