ದಾವಣಗೆರೆ, ಮಾ.20-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್ ಅಧಿಕಾರ ವಹಿಸಿಕೊಂಡರು.
ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸಿದೆ. ಅಕ್ರಮ ನಡೆದರೆ ನಾನು ಸಹಿಸುವುದಿಲ್ಲ. ಯಾರಿಗೆ ಅನ್ಯಾಯವಾದರೂ ನಾನು ಬಿಡುವುದಿಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಲ್ಲಿ ನೋಡಿಕೊಳ್ಳುತ್ತೇನೆ ಎಂದರು.
ಹಿಂದೆ ಎಸ್ಪಿಯಾಗಿದ್ದ ಡಾ.ಭೀಮಾಶಂಕರ್ ಗುಳೇದ್ ಅವರು ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸಿದ್ದು, ಅವರ ಬಗ್ಗೆ ಕಾರ್ಯವೈಖರಿ ಬಗ್ಗೆ ತಿಳಿದುಕೊಂಡಿದ್ದೇನೆ. ಅದರಂತೆಯೇ ನಾನು ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತೇನೆ ಎಂದರು.
ಈ ವೇಳೆ ಡಾ.ಭೀಮಾಶಂಕರ್ ಎಸ್.ಗುಳೇದ್ ಅವರು ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.