ಕಲಬುರಗಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸಿಗೆ ವೀರಶೈವರು ಸ್ವಾಗತಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಿಲ ಭಾರತ ವೀರಶೈವ ಮಹಾಸಭಾಧ್ಯಕ್ಷ ಶಾಮನೂರು ಶಿವಶಂಕರಪ್ಪ, ಸಚಿವ ಈಶ್ವರ್ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್ ರಾಜ್ಯಸರ್ಕಾರದ ಶಿಫಾರಸನ್ನು ಸ್ವಾಗತಿಸಿದ್ದಾರೆ.
ನಿನ್ನೆ ಕಲಬುರಗಿಯಲ್ಲಿ ನಡೆದ ಪರ-ವಿರೋಧ ಮಾರಾಮಾರಿ ಯಾರ ಪ್ರೇರೇಪಿತದಿಂದ ನಡೆದಿದೆ ಎಂಬುದು ಗೊತ್ತಿಲ್ಲ. ಗಲಾಟೆ ಮಾಡಿದ ಕಿಡಿಗೇಡಿಗಳ ವಿರುದ್ಧ ಪೆÇಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.