ಬೆಂಗಳೂರು,ಮಾ.20- ಕೆರೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಇಂದು ಬೆಳಗ್ಗೆ ಅಗರ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಗಮನಿಸಿದ ಸ್ಥಳೀಯರು ಎಚ್‍ಎಸ್‍ಆರ್ ಲೇಔಟ್ ಠಾಣೆ ಪೆÇಲೀಸರಿಗೆ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೆÇಲೀಸರು ಕೆರೆಯಿಂದ ಶವವನ್ನು ಮೇಲೆತ್ತಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವ್ಯಕ್ತಿಯ ಹೆಸರು-ವಿಳಾಸ ತಿಳಿದುಬಂದಿಲ್ಲ. ಈ ಬಗ್ಗೆ ಎಚ್‍ಎಸ್‍ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.