ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ.
ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳು ವೇದಿಕೆಯಲ್ಲಿ ನೃತ್ಯ ಮಾಡುವಾಗ ಒಬ್ಬರಿಗೊಬ್ಬರಿಗೆ ಮೈಕೈ ತಾಗಿದೆ. ಇಷ್ಟಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.
ಇದನ್ನು ಕಂಡು ಉಪನ್ಯಾಸಕರು ಜಗಳ ಬಿಡಿಸಲು ಮುಂದಾದಾಗ ಅವರಿಗೂ ಏಟುಗಳು ಬಿದ್ದಿವೆ.