ಹಾಸನ, ಮಾ.20- ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್-ಕಾಂಗ್ರೆಸ್ ಜಗಳ ತಾರಕಕ್ಕೇರಿದೆ. ಫ್ಲಕ್ಸ್ಗಳ ವಾರ್ ಜೋರಾಗಿದೆ.
ಅನುಮತಿ ಪಡೆದೂ ಹಾಕಿರುವ ಫ್ಲಕ್ಸ್ಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ನಗರಸಭೆ ಎದುರು ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೆಪಿಸಿಸಿ ಸದಸ್ಯ ಎಚ್.ಕೆ.ಮಹೇಶ್ ನೇತೃತ್ವದಲ್ಲಿ ಕಾಂಗ್ರೆಸ್ನವರು ಪ್ರತಿಭಟನೆ ನಡೆಸಿದರೆ, ನಗರಸಭೆ ಅಧ್ಯಕ್ಷ ಅನಿಲ್ಕುಮಾರ್ ನೇತೃತ್ವದಲ್ಲಿ ಜೆಡಿಎಸ್ನವರು ಪ್ರತಿಭಟನೆ ನಡೆಸಿದ್ದಾರೆ.
ನಗರಸಭೆ ನಿರ್ಣಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ನವರು ಫ್ಲಕ್ಸ್ಗಳನ್ನು ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಜೆಡಿಎಸ್, ಫ್ಲಕ್ಸ್, ಬ್ಯಾನರ್, ಬಂಟಿಂಗ್ಸ್ಗಳನ್ನು ತೆರವುಗೊಳಿಸಿದೆ. ಇದರಿಂದ ಸಿಟ್ಟಿಗೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಸಿಬ್ಬಂದಿ, ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಗರಸಭೆ ಎದುರು ಧರಣಿ ನಡೆಸಿದ್ದಾರೆ.