ಸಾಮಾಜಿಕ ಕಾರ್ಯಕರ್ತರೊಬ್ಬರ ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ:

ಬೆಂಗಳೂರು, ಮಾ.20- ಶಾಸಕ ಬೈರತಿ ಬಸವರಾಜ್ ಬೆಂಬಲಿಗ ಎನ್ನಲಾದ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲಿ ಪಾರ್ಟಿ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಸಾಮಾಜಿಕ ಕಾರ್ಯಕರ್ತರೊಬ್ಬರ ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ಸಾಮಾಜಿಕ ಕಾರ್ಯಕರ್ತ ಪರಮೇಶ್ ಎಂದು ಗುರುತಿಸಲಾಗಿದ್ದು, ಚಾಕು ಇರಿದ ವ್ಯಕ್ತಿಯನ್ನು ಸುರೇಶ್ ಎಂದು ಪತ್ತೆ ಹಚ್ಚಲಾಗಿದೆ.
ಸುರೇಶ್ ಕಳೆದ 17ರಂದು ಕಾಡುಗೋಡಿ ಸಮೀಪದ ರಸ್ತೆಯಲ್ಲಿ ಕುಡಿದು ಕುಪ್ಪಳಿಸಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಬೈಕ್‍ನಲ್ಲಿ ಬಂದ ಪರಮೇಶ್ ಎಂಬಾತ ರಸ್ತೆ ಮಧ್ಯೆ ಪಾರ್ಟಿ ಮಾಡಬೇಡಿ. ವಾಹನ ಹೋಗಲು ದಾರಿ ಬಿಡಿ ಎಂದು ಬುದ್ಧಿಮಾತು ಹೇಳಿದ್ದರು.
ಪರಮೇಶ್ ಬುದ್ಧಿವಾದದಿಂದ ಕೆರಳಿದ ಸುರೇಶ್ ಕುಡಿದ ಮತ್ತಿನಲ್ಲಿ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾನೆ. ತಕ್ಷಣ ಸ್ಥಳೀಯರು ಪರಮೇಶ್‍ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ನಂತರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪರಮೇಶ್ ಸಾಮಾಜಿಕ ಕಾರ್ಯಕರ್ತರಾಗಿದ್ದು, ಈ ಹಿಂದೆ ಶಾಸಕ ಬೈರತಿ ಬಸವರಾಜ್ ಅವರ ವಿರುದ್ಧ ಹಲವಾರು ಕಾನೂನು ಹೋರಾಟ ನಡೆಸಿದ್ದರು. ಹೀಗಾಗಿ ಹಳೆ ವೈಷಮ್ಯದಿಂದ ಶಾಸಕರ ಬೆಂಬಲಿಗರು ಚಾಕು ಇರಿದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಈ ಕುರಿತಂತೆ ಪರಮೇಶ್ ಕಾಡುಗೋಡಿ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ