ಹಾಸನ, ಮಾ.21- ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಪ್ರಕರಣ ಸಂಬಂಧ ಯಥಾಸ್ಥಿತಿ ಮುಂದುವರಿಸಲು ಸಿಎಟಿ ಆದೇಶಿಸಿದೆ. ಈ ಮೂಲಕ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಜಯ ಲಭಿಸಿದ್ದು, ಹಾಸನದಲ್ಲಿಯೇ ಮುಂದುವರಿಯಲಿದ್ದಾರೆ.
ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿದ ಸಂಬಂಧ ಸಿಂಧೂರಿ ಅವರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣದ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ಸಿಎಟಿ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಸೂಚಿಸಲಾಗಿತ್ತು.
ಸದ್ಯ ಹಾಸನದಲ್ಲಿಯೇ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದು, ವರ್ಗಾವಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಮಾ.26ರೊಳಗೆ ಸಿಂಧೂರಿ ಅವರು ಅರ್ಜಿ ಸಲ್ಲಿಸಬೇಕಿದ್ದು, ಏ.2ರೊಳಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೊಸದಾಗಿ ಆದೇಶಿಸಬೇಕಿದೆ. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.