ಲಕ್ನೋ, ಮಾ.21-ಹಿರಿಯರು ಯುವಕರಿಗೆ ಅವಕಾಶ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ ಬೆನ್ನಲ್ಲೇ ಪಕ್ಷದಲ್ಲಿ ದಿಢೀರ್ ಬೆಳವಣಿಗೆಗಳು ಗೋಚರಿಸುತ್ತಿವೆ. ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಾಂತರಾಮ್ ನಾಯಕ್ ರಾಜೀನಾಮೆ ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆಗೆ ಹಿರಿಯ ನಟ ರಾಜ್ ಬಬ್ಬರ್ ತ್ಯಾಗಪತ್ರ ಸಲ್ಲಿಸಿದ್ಧಾರೆ. ಆದರೆ ಈ ಬಗ್ಗೆ ಪಕ್ಷದ ವರಿಷ್ಠ ಮಂಡಳಿ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಇದೇ ವೇಳೆ ಗುಜರಾತ್ ಪಿಸಿಸಿ ಸ್ಥಾನಕ್ಕೂ ಭರತ್ಸಿನ್ಹಾ ಸೋಳಂಕಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಪಕ್ಷವನ್ನು ಮರುಸಂಘಟಿಸಲು ರಾಹುಲ್ ಗಂಭೀರ ಚಿಂತನೆ ನಡೆಸಿದ್ದು, ಅವರ ಕೈಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣೀಗೆ ಕಂಡುಬಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.