ಕೊಯಮತ್ತೂರು, ಮಾ.21-ದುಷ್ಕರ್ಮಿಗಳು ಬಿಜೆಪಿ ಮುಖಂಡರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ಮುಂಜಾನೆ ನಡೆದಿದೆ. ಈ ಕೃತ್ಯದಲ್ಲಿ ಕಾರಿಗೆ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಆರ್. ನಂದಕುಮಾರ್ ಅವರ ಮನೆ ಮೇಲೆ ಇಂದು 3ರ ನಸುಕಿನಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾದರು. ಈ ಸಂದರ್ಭದಲ್ಲಿ ನಂದಕುಮಾರ್ ಮತ್ತು ಕುಟುಂಬದ ಸದಸ್ಯರು ಮನೆಯಲ್ಲಿ ನಿದ್ರಿಸುತ್ತಿದ್ದರು.
ಪೆಟ್ರೋಲ್ ಬಾಂಬ್ ದಾಳಿಯಲ್ಲಿ ಬಿಜೆಪಿ ಮುಖಂಡರಿಗೆ ಸೇರಿದ ಕಾರಿಗೆ ಹಾನಿಯಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಪುದುಕೋಟೈ ಜಿಲ್ಲೆಯಲ್ಲಿ ದ್ರಾವಿಡ ನಾಯಕ ಪೆರಿಯಾರ್ ಪ್ರತಿಮೆಗೆ ಹಾನಿ ಮಾಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಎರಡು ವಾರಗಳ ಹಿಂದೆ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದರು.