ಚಿಕ್ಕಮಗಳೂರು, ಮಾ.21- ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರು ಇಂದು ಬೆಳಗ್ಗೆ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು.
ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ರಾಹುಲ್ಗಾಂಧಿ ಅವರು ಸಂಸ್ಕøತ ಪಾಠಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ತಮ್ಮ ತಂದೆ ರಾಜೀವ್ಗಾಂಧಿ ಹಾಗೂ ಅಜ್ಜಿ ಇಂದಿರಾಗಾಂಧಿ ಅವರು ಶಾರದಾ ಮಠದ ಭಕ್ತರಾಗಿದ್ದು, ಅವರು ಆಗಮಿಸಿದ್ದ ಈ ಪುಣ್ಯಕ್ಷೇತ್ರಕ್ಕೆ ನಾನು ಬಂದಿದ್ದು ಸಂತಸ ತಂದಿದೆ ಎಂದರು.
ಅಜ್ಜಿ ಇಂದಿರಾಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆ ಚಿಕ್ಕಮಗಳೂರು ಆಗಿದೆ. ಶಂಕರಾಚಾರ್ಯರು ಸ್ಥಾಪಿಸಿದ ಪುಣ್ಯಕ್ಷೇತ್ರ ಶೃಂಗೇರಿಗೆ ತಾವು ಆಗಮಿಸಿ ತಾಯಿ ಶಾರದಾಂಬೆಯ ದರ್ಶನ ಪಡೆದಿರುವುದು ನೆಮ್ಮದಿ ತಂದಿದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ರೋಷನ್ಬೇಗ್, ಸಚಿವ ಡಿ.ಕೆ.ಶಿವಕುಮಾರ್, ಮುಖಂಡರಾದ ರಾಜೇಗೌಡ, ಡಾ.ಕೆ.ಪಿ.ಅಂಶುಮಂತ್ ಮತ್ತಿತರ ಮುಖಂಡರಿದ್ದರು.
ನಕ್ಸಲ್ ಪ್ರದೇಶವಾದ ಕಾರಣ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.