ಬೆಂಗಳೂರು, ಮಾ.21- ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಬಂದ ದರೋಡೆಕೋರರು ಬೈಕ್ಗೆ ಡಿಕ್ಕಿ ಹೊಡೆಸಿ ಜಗಳವಾಡಿ ಚಾಕುವಿನಿಂದ ಇರಿದು ಐದುಸಾವಿರ ಕಸಿದು ಪರಾರಿಯಾಗಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರದ ನಿವಾಸಿ ಸುರೇಶ್ಪೂಜಾರಿ ಎಂಬುವರು ನಿನ್ನೆ ಸಂಜೆ 4 ಗಂಟೆಯಲ್ಲಿ ನಾಗರಬಾವಿ ಮುಖ್ಯರಸ್ತೆಯ ಸರ್ವೋದಯ ಶಾಲೆ ಬಳಿ ಬೈಕ್ನಲ್ಲಿ ಹೋಗುತ್ತಿದ್ದರು.
ಈ ವೇಳೆ ಮತ್ತೊಂದು ಬೈಕ್ನಲ್ಲಿ ಹಿಂಬಾಲಿಸಿಬಂದ ದರೋಡೆಕೋರರು ಸುರೇಶ್ ಅವರ ಬೈಕ್ಗೆ ಡಿಕ್ಕಿ ಹೊಡೆಸಿ ಅವರೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಐದು ಸಾವಿರ ಕಸಿದುಕೊಂಡು ಪರಾರಿಯಾಗಿದ್ದಾರೆ.
ಸುರೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.