ಮೈಸೂರು ಮತ್ತು ಬೆಂಗಳೂರು ನಡುವಿನ ಎಂಟು ಪಥಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಾರ್ಚ್ 24ರಿಂದ ಆರಂಭ

 

ಮೈಸೂರು, ಮಾ.22- ಮೈಸೂರು ಮತ್ತು ಬೆಂಗಳೂರು ನಡುವಿನ ಎಂಟು ಪಥಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಮಾರ್ಚ್ 24ರಂದು ಚಾಲನೆ ದೊರೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಅಂದು ಮಧ್ಯಾಹ್ನ 1 ಗಂಟೆಗೆ ಯಶವಂತಪುರ ಬಳಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

6400 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಬೆಂಗಳೂರಿನಿಂದ ನಿಡಘಟ್ಟ, ನಂತರ 2ನೆ ಹಂತದಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಈ ರಸ್ತೆ ನಿರ್ಮಾಣದಲ್ಲಿ ಆರು ಪಥಗಳ ರಸ್ತೆ ಹಾಗೂ ಎರಡು ಸರ್ವೀಸ್ ರಸ್ತೆ ಇರುತ್ತದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ